ನಟ ದರ್ಶನ್ ಆಸ್ಪತ್ರೆಗೆ ದಾಖಲು

Update: 2024-11-01 23:28 IST
Photo of Darshan

ದರ್ಶನ್

  • whatsapp icon

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣ ಸಂಬಂಧ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್, ಬೆನ್ನು ನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಕ್ರವಾರ ಇಲ್ಲಿನ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಲ್ಲಿದ್ದ ದರ್ಶನ್, ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಅ.30ರಂದು ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಈ ನಿಟ್ಟಿನಲ್ಲಿ ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಆಸ್ಪತ್ರೆಗೆ ಆಗಮಿಸಿದ ದರ್ಶನ್, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News