ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ

Update: 2024-07-09 08:23 GMT

ಬೆಂಗಳೂರು, ಜು.9: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮನೆಯಿಂದ ಊಟ,ಹಾಸಿಗೆ, ಪುಸ್ತಕ ಪಡೆಯಲು ಅನುಮತಿಗೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಸಿ ಊಟ, ಹಾಸಿಗೆ, ಪುಸ್ತಕ ಮನೆಯಿಂದ ಪಡೆಯಲು ಅನುಮತಿ ಕೋರಿದ್ದು, ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಮನವಿ ಮಾಡಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ - ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ.

ಅಲ್ಲದೆ, ಅತಿಸಾರ / ಭೇದಿಯಿಂದಾಗಿ ತೂಕ ತುಂಬಾ ಕಡಿಮೆಯಾಗಿದೆ. ಹಲವು ಕೆಜಿಗಳಷ್ಟು ತೂಕವನ್ನು ದರ್ಶನ್ ಕಳೆದುಕೊಂಡಿದ್ದೇನೆ. ಮನೆ ಊಟಕ್ಕೆ ಅನುಮತಿ ನೀಡುವಂತೆ ತನ್ನ ಕೋರಿಕೆಯನ್ನು ಮನ್ನಿಸಿಲ್ಲ. ಕೋರ್ಟ್ ಆದೇಶವಿಲ್ಲವೆಂದು ಜೈಲು ಅಧಿಕಾರಿಗಳು ಅನುಮತಿ ನೀಡಿಲ್ಲ. ಜೈಲು ಅಧಿಕಾರಿಗಳ ನಿರಾಕರಣೆ ಕಾನೂನುಬಾಹಿರ, ಅಮಾನವೀಯ. ಹೀಗೇ ಮುಂದುವರಿದರೆ ತಾನು ಮತ್ತಷ್ಟು ತೂಕ ಕಳೆದುಕೊಳ್ಳಬಹುದು. ಇದು ಅನಾರೋಗ್ಯಕ್ಕೂ ಕಾರಣವಾಗಬಹುದು ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ.

ಮನೆ ಊಟಕ್ಕೆ ಅನುಮತಿ ನೀಡಿದರೆ ಯಾರಿಗೂ ತೊಂದರೆಯಾಗುವುದಿಲ್ಲ. ಇದರಿಂದ ಸರಕಾರದ ಬೊಕ್ಕಸಕ್ಕೂ ಹೊರೆ ಕಡಿಮೆಯಾಗುತ್ತದೆ. ಹೀಗಾಗಿ ಕುಟುಂಬದವರಿಂದ ಮನೆ ಊಟ ಪಡೆಯಲು ಅನುಮತಿ ನೀಡಬೇಕು ಎಂದವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News