ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿ.ಕೆ.ಶಿವಕುಮಾರ್

Update: 2024-12-03 16:43 GMT

ಡಿ.ಕೆ.ಶಿವಕುಮಾರ್

ಬೆಂಗಳೂರು : ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನ ಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಭರವಸೆ ನೀಡಿದರು.

ಮಂಗಳವಾರ ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಭೇಟಿ ಮಾಡಿ ಮನವಿ ಸ್ಪೀಕರಿಸಿದ ಬಳಿಕ ಮಾತನಾಡಿದ ಅವರು, 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ ಎಂದರು.

ಹಿಂದಿನ ಸರಕಾರದ ಅವಧಿಯಲ್ಲಿ ನೀವು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಲಾಗಿತ್ತು. ಆಗ ನಿಮ್ಮ ಜತೆ ಚರ್ಚೆ ಮಾಡಲಾಗಿತ್ತು. ಈಗಲೂ ನೀವು ಹೋರಾಟ ಮಾಡುತ್ತಿದ್ದೀರಿ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ವ್ಯವಸ್ಥೆ ಇವೆ. ಏನೇ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕು ಎಂದು ಅವರು ತಿಳಿಸಿದರು.

ಖಾಸಗಿಯವರ ಜತೆ ಗುತ್ತಿಗೆ ಆಧಾರದ ಮೇಲೆ ನೀವು ಕೆಲಸ ಮಾಡುತ್ತಿದ್ದೀರಿ. ನಿಮಗೆ ಎಲ್ಲ ರೀತಿಯಲ್ಲೂ ಸೂಕ್ತವಾಗುವಂತೆ ನೆರವು ನೀಡಬೇಕು. ಈ ವಿಚಾರವಾಗಿ ನಮ್ಮ ಸರಕಾರ ಸಿಎಂಸಿ ಮಟ್ಟದಲ್ಲಿ ಕೆಲವು ಪರಿಹಾರ ತೆಗೆದುಕೊಂಡಿದೆ. ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲ ಗುಂಪುಗಳನ್ನು ಕರೆಸಿ ಚರ್ಚೆ ಮಾಡಿ ಕಾನೂನು ಚೌಕಟ್ಟಿನಲ್ಲಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರಿಹಾರ ಕೈಗೊಳ್ಳುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News