ಪಾಕಿಸ್ತಾನ ಪರ ಘೋಷಣೆ ಆರೋಪ: ಇಬ್ಬರ ಬಂಧನ

Update: 2023-12-03 16:47 GMT

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯ ನಡುವಿನ 4ನೇ ಟಿ20 ಪಂದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಆರೋಪದಡಿ ಇಬ್ಬರು ಆರೋಪಿಗಳನ್ನು ಇಲ್ಲಿನ ಜೆ.ಪಿ.ನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಇನಾಯತ್ ಉಲ್ಲಾಖಾನ್ ಹಾಗೂ ಸೈಯ್ಯದ್ ಮುಬಾರಕ್ ಎಂಬುವರನ್ನು ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಡಿ.1ರಂದು ಶುಕ್ರವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ವೇಳೆ ಜೆ.ಪಿ.ನಗರದ ಮೊದಲನೇ ಹಂತದಲ್ಲಿರುವ ಪಬ್ ಒಂದರಲ್ಲಿ ಕುಳಿತಿದ್ದ ಆರೋಪಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು ಎನ್ನಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಇತರ ಗ್ರಾಹಕರು, ಜೆ.ಪಿ.ನಗರ ಠಾಣಾ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಜೆ.ಪಿ.ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಆರೋಪಿಗಳು ‘ಮದ್ಯದ ನಶೆಯಲ್ಲಿ ಕೂಗಿದ್ದಾಗಿ' ಪೊಲೀಸರ ಮುಂದೆ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಗಲಭೆಗೆ ಪ್ರಚೋದನೆ, ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಆರೋಪದಡಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News