ಆನೇಕಲ್‌ | ಸುತ್ತಿಗೆಯಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ

Update: 2024-12-28 14:56 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಪತಿಯೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಆನೇಕಲ್‌ನ ಅತ್ತಿಬೆಲೆ ಮುಖ್ಯ ರಸ್ತೆಯ ಶುಭ ಬಡಾವಣೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕೊಲೆಯಾದ ಮಹಿಳೆಯನ್ನು ಬಿಹಾರ ಮೂಲದ ಮಲ್ಲಿಕಾ ಖಾತೂನ್ (35) ಎಂದು ಗುರುತಿಸಲಾಗಿದೆ. ಪತಿ ಮುಹಮ್ಮದ್ ಸೈಯ್ಯದ್ ಅನ್ಸಾರಿ ಪತ್ನಿಯನ್ನೇ ಕೊಂದ ಪತಿ. ಶೀಲ ಶಂಕಿಸಿ ಪತಿ ಸೈಯ್ಯದ್ ಅನ್ಸಾರಿ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಗಂಡ ಅನ್ಸಾರಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ. ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಇಂದು ಬೆಳಿಗ್ಗೆ ಕೂಡ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡಿದ್ದಾನೆ ಎನ್ನಲಾಗಿದೆ. ದಂಪತಿ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಪತ್ನಿಯನ್ನೇ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News