ಆನೇಕಲ್ | ಜಾತ್ರಾ ಮಹೋತ್ಸವದ ವೇಳೆ ತೇರು ಬಿದ್ದು ಸಾವು: ಅಧಿಕಾರಗಳ ಅಮಾನತು

Update: 2025-03-27 23:21 IST
ಆನೇಕಲ್ | ಜಾತ್ರಾ ಮಹೋತ್ಸವದ ವೇಳೆ ತೇರು ಬಿದ್ದು ಸಾವು: ಅಧಿಕಾರಗಳ ಅಮಾನತು
  • whatsapp icon

ಬೆಂಗಳೂರು : ಇಲ್ಲಿನ ಆನೇಕಲ್ ತಾಲೂಕು ಹುಸ್ಕೂರು ಗ್ರಾಮದ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವದ ತೇರು ಬಿದ್ದಿರುವ ಘಟನೆಯ ಹಿನ್ನೆಲೆಯಲ್ಲಿ ರಾಜಸ್ವ ನಿರೀಕ್ಷಕ ಪ್ರಶಾಂತ್ ಹಾಗೂ ಗ್ರಾಮ ಆಡಳಿತಾಧಿಕಾರಿ ಕಾರ್ತಿಕ್ ಡಿ. ಅವರನ್ನು ಇಲಾಖೆ ವಿಚಾರಣೆ ಬಾಕಿ ಉಳಿಸಿ ಅಮಾನತುಗೊಳಿಸಿ ಆದೇಶಿಸಲಾಗಿದೆ.

ತೇರು ಬಿದ್ದ ಘಟನೆಯನ್ನು ತಡೆಯಲು ಸ್ಥಳದಲ್ಲಿದ್ದ ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ವಿಫಲರಾಗಿದ್ದಾರೆಂದು ಆನೇಕಲ್ ತಾಲ್ಲೂಕು ತಹಸೀಲ್ದಾರ್ ನೀಡಿದ್ದ ವರದಿಯ ಆಧಾರದ ಮೇಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಇವರಿಬ್ಬರನ್ನೂ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಮಾ.22 ರಂದು ನಡೆದ ಮದ್ದೂರಮ್ಮ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಾಯಸಂದ್ರ ಗ್ರಾಮದ ತೇರು ನೆಲಕ್ಕೆ ಅಪ್ಪಳಿಸಿದ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಜತೆಗೆ, ಈ ಘಟನೆ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.


Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News