ನಮಗೆ ಸೋಲು-ಗೆಲುವು ಹೊಸದಲ್ಲ : ಅನಿತಾ ಕುಮಾರಸ್ವಾಮಿ

Update: 2024-11-25 15:47 GMT

ಬೆಂಗಳೂರು : ರಾಜಕಾರಣದಲ್ಲಿ ನಮ್ಮ ಕುಟುಂಬಕ್ಕೆ ಸೋಲು-ಗೆಲುವು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ಸೋಮವಾರ ಸಾಮಾಜಿಕ ಜಾಲತಾಣ ಮೂಲಕ ಪ್ರತಿಕ್ರಿಯಿಸಿದ ಅವರು, ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ ಎಂದು ತಿಳಿಸಿದ್ದಾರೆ.

ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು, ಮನುಷ್ಯನಾಗಿ ಸೋತಿಲ್ಲ. ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ.ಅಲ್ಲದೆ, ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News