ಚುನಾವಣೆ ಪ್ರಚಾರ ಕಾರ್ಯಕ್ಕೆ ಕಾಂಗ್ರೆಸ್‌ ಪಕ್ಷದಿಂದ ಉಸ್ತುವಾರಿಗಳ ನೇಮಕ

Update: 2024-03-17 13:27 GMT

ಬೆಂಗಳೂರು: ಲೋಕಸಭಾ ಚುನಾವಣೆಗೆ ಪಕ್ಷದ ಮುಖಂಡರ ಪ್ರಚಾರ ಕಾರ್ಯಕ್ರಮ ಆಯೋಜಿಸಲು ಹಾಗೂ ಪ್ರವಾಸ ಕಾರ್ಯಗಳ ಜವಾಬ್ದಾರಿಗೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು-ಕೊಡಗು, ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಹಾಸನ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ರಿಗೆ ಜವಾಬ್ದಾರಿ ನೀಡಲಾಗಿದೆ.

ಅದೇ ರೀತಿಯಲ್ಲಿ ಎರಡನೇ ಹಂತ ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಗೆ ಹೊಣೆಗಾರಿಕೆ ವಹಿಸಲಾಗಿದೆ.

ಈ ಪ್ರವಾಸ ಕಾರ್ಯಕ್ರಮದ ಮಾರ್ಗಗಳನ್ನು ವ್ಯವಸ್ಥಿತವಾಗಿ ಆಯೋಜಿಸಲು ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಎಲ್ಲ ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಮಾರ್ಗ ಹಾಗೂ ನಕ್ಷೇಯನ್ನು ಸಿದ್ದಪಡಿಸಿ ಒಂದು ವಾರದೊಳಗೆ ಸಲ್ಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News