ಬಿಬಿಎಂಪಿಯ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ನೋಡಲ್ ಅಧಿಕಾರಿಗಳ ನಿಯೋಜನೆ

Update: 2024-03-05 13:17 GMT

ಬೆಂಗಳೂರು: ಬಿಬಿಎಂಪಿಯ 35 ವಾರ್ಡ್‍ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕವಾಗಿ ಮೇಲುಸ್ತುವಾರಿಗಾಗಿ ಕಾರ್ಯಪಾಲಕ ಅಭಿಯಂತರ ಧರಣೇಂದ್ರ ಕುಮಾರ್  ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಕೋರಲಾಗಿದೆ.

ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್‍ಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ 1916 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಕೋರಲಾಗಿದೆ.

ಹೊರ ವಲಯಗಳಲ್ಲಿ ಬರುವ 35 ವಾರ್ಡ್‍ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್‍ಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News