ಬೆಂಗಳೂರು | ಮಾರಕಾಸ್ತ್ರ ಹಿಡಿದು ವ್ಹೀಲಿಂಗ್: ಇಬ್ಬರ ಬಂಧನ

Update: 2025-03-19 22:26 IST
ಬೆಂಗಳೂರು | ಮಾರಕಾಸ್ತ್ರ ಹಿಡಿದು ವ್ಹೀಲಿಂಗ್: ಇಬ್ಬರ ಬಂಧನ
  • whatsapp icon

ಬೆಂಗಳೂರು : ಮಾರಕಾಸ್ತ್ರ ಹಿಡಿದು ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹೇಶ್ (19) ಹಾಗೂ ಮಂಜುನಾಥ್ (19) ಬಂಧಿತ ಆರೋಪಿಗಳು ಎಂದು ಪೊಲೀಸರು ಹೇಳಿದ್ದಾರೆ.

ಮಾ.15ರಂದು ಔಟರ್ ರಿಂಗ್ ರಸ್ತೆಯ ಚೌಡೇಶ್ವರಿನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರ್ರವನ್ನು ರಸ್ತೆಗೆ ಹಾಕಿ ಸ್ಕೂಟರ್‍ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಇದನ್ನು ಗಂಭೀರವಾಗಿ ಪರಿಗಣಿಸಿದ ಸಂಚಾರ ಠಾಣೆ ಪೊಲೀಸರು, ಇಬ್ಬರೂ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News