ಬೆಂಗಳೂರು | ಪಿಯುಸಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: 9 ಜನ ವಿರುದ್ಧ ಎಫ್‍ಐಆರ್

Update: 2024-11-28 12:56 GMT

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ಪಿಯುಸಿ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಸೈಯದ್ ಇಶಾನ್ ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ತೀವ್ರಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ನ.21ರ ಸಂಜೆ 6.30ರ ಸುಮಾರಿಗೆ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿತ್ತು. ಹಾಕಿ ಸ್ಟಿಕ್ ಸೇರಿದಂತೆ ಮಾರಕಾಸ್ತ್ರಗಳಿಂದ ದುಷ್ಕಿರ್ಮಿಗಳ ತಂಡ ಹಲ್ಲೆ ನಡೆಸಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಕುರಿತು ವಿದ್ಯಾರ್ಥಿಯ ತಂದೆ ಆರೀಫ್ ಮಾತನಾಡಿ, ಮಗ ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಏಕಾಏಕಿ ಹಲ್ಲೆ ಮಾಡಿದ್ದು, ಕತ್ತು, ಕೈಗೆಲ್ಲಾ ಗಾಯ ಆಗಿದೆ. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News