ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-04-05 13:03 IST
ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ
  • whatsapp icon

ಬೆಂಗಳೂರು : ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು ಹಾಗೂ ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತ ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್‌ ರವರ 118 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಬಾಬು ಜಗಜೀವನ್ ರಾಮ್‌ ಅವರು ದೇಶ ಕಂಡ ಅಪ್ರತಿಮ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. "ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ" ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News