ಬೆಂಗಳೂರು | ಸದಾಶಿವನಗರ ಠಾಣಾ ವ್ಯಾಪ್ತಿಯೊಂದರಲ್ಲೇ 1.02ಲಕ್ಷ ಸಂಚಾರ ಉಲ್ಲಂಘನೆ ಪ್ರಕರಣ ದಾಖಲು!

Update: 2024-05-28 13:32 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಡಿಜಿಟಲ್ ಎಫ್‍ಟಿವಿಆರ್ ಕ್ಯಾಮೆರಾಗಳ ನೆರವಿನಿಂದ ಫೋಟೊಗಳನ್ನು ಆಧರಿಸಿ 2024ನೇ ಸಾಲಿನಲ್ಲಿ (ಮೇ 27ರ ವರೆಗೆ) ಸದಾಶಿವನಗರದ ಸಂಚಾರ ಠಾಣೆ ವ್ಯಾಪ್ತಿಯೊಂದರಲ್ಲೇ 1.02 ಲಕ್ಷ ಸಂಚಾರ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆಯಿಂದ ಸಂಭವಿಸುವ ಅಪಘಾತಗಳನ್ನು ನಿಯಂತ್ರಿಸಲು ನಗರ ಸಂಚಾರ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇದೆ. ಪ್ರತಿಯೊಂದು ಸಿಗ್ನಲ್‍ಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಲು ಸಾಧ್ಯವಿಲ್ಲ. ಹೀಗಾಗಿ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸುವವರ ವಾಹನದ ನಂಬರ್ ಸಮೇತ ಫೋಟೋಗಳು ಆ ಕ್ಯಾಮೆರಾಗಳಲ್ಲಿ ಸೆರೆಯಾಗುತ್ತವೆ. ಇದರ ಆಧಾರದ ಮೇಲೆ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ದಂಡ ಬಾಕಿ ಇರುವ ವಾಹನ ಸವಾರರ ಮೊಬೈಲ್ ಹಾಗೂ ಮನೆಗಳಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News