ಬೆಂಗಳೂರು | ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 ಪ್ರಕರಣ ದಾಖಲು

Update: 2024-09-14 06:09 GMT

ಬೆಂಗಳೂರು: ಜೀವ ಬೆದರಿಕೆ ಆರೋಪ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್.ಐ.ಆರ್. ದಾಖಲಾಗಿವೆ.

ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಸೇರಿದಂತೆ ನಾಲ್ವರು 30 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ಎಂಬವರು ಪೊಲೀಸ್ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಶಾಸಕ ಮುನಿರತ್ನ, ಸರಕಾರಿ ಅಧಿಕಾರಿ ವಿಜಯ್ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ಎಂಬವರು ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

 ಪ್ರಕರಣ ದಾಖಲು

ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬವರು ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News