ಬೆಂಗಳೂರು | ಮಹಿಳಾ ಟೆಕ್ಕಿ ಆತ್ಮಹತ್ಯೆ

Update: 2024-07-05 16:37 GMT

ಪೂಜಾ(26) 

ಬೆಂಗಳೂರು : ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಂಗಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಲಕ್ಷ್ಮಯ್ಯ ಲೇಔಟ್‍ನಲ್ಲಿ ವರದಿಯಾಗಿದೆ.

ಪೂಜಾ(26) ಎಂಬಾಕೆ ಆತಹತ್ಯೆ ಮಾಡಿಕೊಂಡ ಟೆಕ್ಕಿ ಎಂದು ಗುರುತಿಸಲಾಗಿದೆ.

ಪೂಜಾ ಎಂಬಾಕೆ ಒಂದು ವರ್ಷದ ಹಿಂದೆ ಸುನೀಲ್ ಎಂಬಾತನನ್ನು ವಿವಾಹವಾಗಿದ್ದು, ಇಬ್ಬರು ನಗರದ ಖಾಸಗಿ ಕಂಪೆನಿಯೊಂದರಲ್ಲಿ ಸಾಫ್ಟ್‌ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜು4ರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಪೂಜಾ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ, ಮೃತ ಪೂಜಾಳ ತಾಯಿ ವರದಕ್ಷಿಣೆ ಕಿರುಕುಳದಿಂದ ಮನನೊಂದು ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಗಂಗಮನಗುಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಮಾಹಿತಿ ತಿಳಿದ ಕೂಡಲೇ ನಗರದ ಗಂಗಮನಗುಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News