ಬೆಂಗಳೂರು | ದೇವಸ್ಥಾನಕ್ಕೆ ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿ ಬಂಧನ

Update: 2024-07-24 16:47 GMT

ಸಾಂದರ್ಭಿಕ ಚಿತ್ರ (PC : Meta AI)

ಬೆಂಗಳೂರು : ದೇವಸ್ಥಾನಕ್ಕೆ ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಅರ್ಚಕರೊಬ್ಬರನ್ನು ಪೋಕ್ಸೋ ಕಾಯ್ದೆಯಡಿ ಇಲ್ಲಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬುಧವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಪ್ರಕಾಶ್(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜು.21ರ ರವಿವಾರ ಬಾಲಕಿ ದೇವಸ್ಥಾನಕ್ಕೆ ಬಂದಿದ್ದರು. ಆಗ ದೇವಸ್ಥಾನ ಪಕ್ಕದಲ್ಲಿದ್ದ ಕೊಠಡಿಗೆ ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ, ಆಕೆಯ ತಾಯಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ದೂರಿನನ್ವಯ ಆರೋಪಿಯನ್ನು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News