ಬೆಂಗಳೂರು | ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

Update: 2024-08-17 14:01 GMT

ಬೆಂಗಳೂರು: ಕರ್ತವ್ಯನಿರತ ಪಿಜಿ ವೈದ್ಯೆಯ ಮೇಲೆ ನಡೆದ ಅಮಾನುಷ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಶನಿವಾರ ರಾಜಾಜಿನಗರದ ಇಎಸ್‍ಐಸಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಆರ್‌ ಜಿಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಕೊಲೆ ಪ್ರಕರಣ ದೇಶವನ್ನು ಬೆಚ್ಚಿಬೀಳಿಸಿದೆ. ವೈದ್ಯರಿಗೆ ಅವರದೇ ಆಸ್ಪತ್ರೆಗಳಲ್ಲಿ ಸುರಕ್ಷತೆ ಇಲ್ಲದಿದ್ದರೆ, ಈ ದೇಶದಲ್ಲಿ ಸುರಕ್ಷತೆ ಯಾರಿಗೆ ಖಾತ್ರಿಯಾಗಿದೆ? ಇದು ಈಗ ವೈದ್ಯರ ಸಮಸ್ಯೆ ಮಾತ್ರವಲ್ಲ, ದೇಶದ ಜನರ ಸಮಸ್ಯೆಯಾಗಿದೆ ಎಂದು ತಿಳಿಸಿದರು.

ವೈದ್ಯರು ಸೇರಿ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ, ಹಿಂಸೆ, ದಾಂಧಲೆ ನಡೆಯುತ್ತಿರುವುದು ವಿಷಾದಕರವಾಗಿದೆ. ದಾಳಿ, ಗಲಭೆ, ಅಹಿತಕರ ಘಟನೆಗಳನ್ನು ತಡೆಯಲು ಕೇಂದ್ರ ಸರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಆರೋಗ್ಯ ಕಾರ್ಯಕರ್ತರು ಎದುರಿಸುತ್ತಿರುವ ಅಪಾಯಗಳನ್ನು ಮತ್ತು ಸೇವೆಯಲ್ಲಿ ನಿರತರಾಗಿರುವವರಿಗೆ ರಕ್ಷಣೆ ನೀಡಲು ಕಠಿಣ ಕಾನೂನು ಜಾರಿಗೆಯಾಗಬೇಕಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇಡೀ ವೈದ್ಯಕೀಯ ಭ್ರಾತೃತ್ವವು ಈ ಕೂಡಲೇ ಕೊಲೆಯಾದ ವೈದ್ಯೆಗೆ ನ್ಯಾಯ ಸಿಗಬೇಕು. ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನೂ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News