ಬೆಂಗಳೂರು | ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರು ಮೃತ್ಯು
Update: 2025-01-04 09:58 GMT
ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಮಹಿಳೆಯರಿಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ.
ಗೋವಿಂದಪುರದ ನಾಝಿಯಾ ಸುಲ್ತಾನ (30), ನಾಝಿಯಾ ಇರ್ಫಾನ (32) ಮೃತ ಸಹೋದರಿಯರು. ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ಬಿಬಿಎಂಪಿ ಕಸದ ಲಾರಿ ತೆರಳುತ್ತಿತ್ತು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದಿದ್ದ ಮಹಿಳೆಯರು ಕಸದ ಲಾರಿಯನ್ನು ಎಡಗಡೆಯಿಂದ ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಎದುರಿಗೆ ಬೈಕ್ವೊಂದು ಬಂದಿದೆ. ಹೀಗಾಗಿ ಪಕ್ಕದಲ್ಲಿದ್ದ ಲಾರಿಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದ ಪರಿಣಾಮ, ಲಾರಿ ಕೆಳಗೆ ಸಿಕ್ಕು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಲಾರಿ ಚಾಲಕನ್ನು ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಹೆಣ್ಣೂರು ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.