ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2.63 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆ

Update: 2024-03-05 16:26 GMT

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ರೂ. ಮೌಲ್ಯದ 4.249 ಗ್ರಾಂ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ಫೆಬ್ರವರಿ ತಿಂಗಳಲ್ಲಿ ವಿಮಾನ ನಿಲ್ದಾಣದಲ್ಲಿ ಡಿಆರ್ ಐ ವಶಪಡಿಸಿಕೊಂಡ ನಾಲ್ಕನೇ ಪ್ರಕರಣ ಇದಾಗಿದ್ದು, ಇಲ್ಲಿಯವರೆಗೆ, ಕೇಂದ್ರ ಸಂಸ್ಥೆ ಎಲ್ಲಾ ನಾಲ್ಕು ಕಾರ್ಯಾಚರಣೆಗಳಲ್ಲಿ 12.44 ಕೋಟಿ ರೂ. ಮೌಲ್ಯದ ಸುಮಾರು 20 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಕೆಐಎ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News