ಬೆಂಗಳೂರು | ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
Update: 2024-04-06 11:33 GMT
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಸಂಸ್ಥೆಯ (ಬಿಎಂಸಿಆರ್ಐ) ಮಹಿಳಾ ಹಾಸ್ಟೆಲ್ನಲ್ಲಿ ತಂಗಿದ್ದ 47 ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ನಲ್ಲಿ 29 ವಿದ್ಯಾರ್ಥಿನಿಯರು, ಐವರು ಎಚ್ ಬ್ಲಾಕ್ನಲ್ಲಿ ಹಾಗೂ ನಾಲ್ವರು ತುರ್ತು ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ವಾಂತಿ, ಭೇದಿಯಿಂದ ತ್ರೀವ ಅಸ್ಬಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಬಿಎಂಸಿಆರ್ಐ ಮುಖ್ಯಸ್ಥ ಹಾಗೂ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಲು ಕಾರಣ ಏನೆಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.