ಬೆಂಗಳೂರು | ಕಾರು ಢಿಕ್ಕಿ ಹೊಡೆದು ಮಗು ಮೃತ್ಯು

Update: 2024-05-26 13:11 GMT

ಬೆಂಗಳೂರು : ಕಾರು ಗುದ್ದಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ನಾಗಮಣಿ(6) ಎಂಬಾಕೆ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಮೇ 25ರ ಶನಿವಾರ ಸಂಜೆ ಬನ್ನೇರುಘಟ್ಟ ರಸ್ತೆಯಲ್ಲಿರುವ ತಮ್ಮ ಮನೆಯ ಮುಂದೆ ಆಟವಾಡುತ್ತಿದ್ದಳು. ಆ ಸಂದರ್ಭದಲ್ಲಿ ಪಕ್ಕದ ಮನೆಯವರು ಮನೆಯಿಂದ ಕಾರನ್ನು ಹೊರಗೆ ತೆಗೆದುಕೊಂಡು ಬಂದಾಗ ಈಕೆಗೆ ಗುದ್ದಿದ ಪರಿಣಾಮ ತೀವ್ರ ಗಾಯಗೊಂಡ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿದ ಕಗ್ಗಲಿಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News