ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ : ಚಾಲಕ ಪ್ರಾಣಾಪಾಯದಿಂದ ಪಾರು

Update: 2024-08-20 07:18 GMT

ಬೆಂಗಳೂರು : ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ನಡೆದಿದೆ.

ಚಾಲಕನ ವಿವರ ಲಭ್ಯವಾಗಿಲ್ಲ. ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಸದಾಶಿವನಗರ ಪೊಲೀಸ್ ಠಾಣೆ ಬಳಿ ಇರುವ ಸಿಗ್ನಲ್‌ನಲ್ಲಿಯೇ ಈ ಘಟನೆ ಸಂಭವಿಸಿದ್ದು, ಸಂಚಾರ ದಟ್ಟಣೆ ಆಗಿರುವುದಾಗಿ ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News