ಬೆಂಗಳೂರು | ಪಿ.ಜಿ.ಯ ಐದನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

Update: 2024-10-05 14:06 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಡೆತ್‍ನೋಟ್ ಬರೆದಿಟ್ಟು ಪೇಯಿಂಗ್ ಗೆಸ್ಟ್(ಪಿ.ಜಿ.) ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವೈಟ್‍ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಶಾಂತ್ ಲೇಔಟ್‍ನಲ್ಲಿ ವರದಿಯಾಗಿದೆ.

ಗೌತಮಿ(25) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಕಡಪ ಮೂಲದ ಯುವತಿ, ನಗರದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್‍ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ, ಯಾರೂ ಅಲ್ಲ. ಈ ಬಗ್ಗೆ ತನಿಖೆ ನಡೆದಂತೆ ಹಾಗೂ ಶವವನ್ನು ಪೋಷಕರಿಗೆ ಹಸ್ತಾಂತರಿಸುವಂತೆ ತಿಳಿಸಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ವೈಟ್‍ಫೀಲ್ಡ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ಬಳಿಕ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News