ಬೆಂಗಳೂರು | ಚಾಕುವಿನಿಂದ ಇರಿದು ಯುವತಿಯ ಹತ್ಯೆ
Update: 2024-11-26 13:41 GMT
ಬೆಂಗಳೂರು : ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಇಲ್ಲಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದಿರಾ ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಈ ಘಟನೆ ಜರುಗಿದ್ದು, ಅಸ್ಸಾಂ ಮೂಲದ ಮಾಯಾ ಗೊಗೋಯ್ ಹತ್ಯೆಯಾಗಿರುವ ಯುವತಿ ಎಂದು ಪೊಲೀಸರು ಗುರುತಿಸಿದ್ದಾರೆ.
ಹತ್ಯೆಯಾದ ಮಾಯಾ ಗೊಗೋಯ್ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡು ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದಳು. ನ.23ರಂದು ಮಾಯಾ ಹಾಗೂ ಆಕೆಯ ಪ್ರಿಯಕರ ಆರವ್ ಹಾರ್ನಿ ಇಂದಿರಾನಗರದ ಅಪಾರ್ಟ್ಮೆಂಟ್ನಲ್ಲಿ ರೂಮ್ ಪಡೆದು ತಂಗಿದ್ದರು. ಆದರೆ, ಮಂಗಳವಾರ ಆರವ್ ಹಾರ್ನಿ ಪರಾರಿಯಾಗಿದ್ದು, ಆಕೆಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಇಂದಿರಾನಗರ ಠಾಣೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.