ಬೆಂಗಳೂರು | ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ; ಆರೋಪಿಯ ಬಂಧನ
Update: 2024-12-22 16:26 GMT
ಬೆಂಗಳೂರು : ಸ್ಪಾಗಳ ಸೋಗಿನಲ್ಲಿ ವಿದೇಶಿ ಹಾಗೂ ಹೊರ ರಾಜ್ಯದ ಮಹಿಳೆಯರಿಗೆ ಹೆಚ್ಚಿನ ವೇತನದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ಬಂಧಿತನ್ನು ಅನಿಲ್ ಕುಮಾರ್ ಯಾನೆ ಅನಿಲ್ ರೆಡ್ಡಿ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಆಂಧ್ರ ಮತ್ತು ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಮಾನವ ಕಳ್ಳಸಾಗಾಣೆ, ಅತ್ಯಾಚಾರ ಸೇರಿದಂತೆ ನಾಲ್ಕು ಅಪರಾಧ ಪ್ರಕರಣಗಳು ದಾಖಲಾಗಿವೆ. ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುತ್ತಿದ್ದ ಎಂದು ತಿಳಿಸಲಾಗಿದೆ.
ಆರೋಪಿಯ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಿದ್ದು, ಬಳ್ಳಾರಿ ಕಾರಾಗೃಹದಲ್ಲಿ ಬಂಧನದಲ್ಲಿ ಇರಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.