ಬೆಂಗಳೂರು | ಮಾದಕವಸ್ತು ಮಾರಾಟ ಆರೋಪ : ಓರ್ವನ ಬಂಧನ

Update: 2024-07-28 15:34 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಟ್ಟೆ ವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಅಕ್ರಮವಾಗಿ ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಮಾದಕವಸ್ತು ನಿಗ್ರಹ ದಳದ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.

ನೈಜೀರಿಯಾ ಪ್ರಜೆ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್(41) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 6 ಕೋಟಿ ರೂ. ಮೌಲ್ಯದ 4 ಕೆ.ಜಿ. ಎಂಡಿಎಂಎ ಕ್ರಿಸ್ಟೆಲ್ ಮಾದವಸ್ತು, ಎರಡು ಮೊಬೈಲ್ ಫೋನ್, ಒಂದು ತೂಕದ ಯಂತ್ರ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದ ಮನೆಯೊಂದರಲ್ಲಿ ವಿದೇಶಿ ಪ್ರಜೆಯೊಬ್ಬ ಅಕ್ರಮವಾಗಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ಮಾಹಿತಿ ನೀಡಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News