ಬೆಂಗಳೂರು | 5ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಧರಣಿ

Update: 2025-01-31 19:23 IST
ಬೆಂಗಳೂರು | 5ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಧರಣಿ
  • whatsapp icon

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 12 ಸಾವಿರ ರೂ. ಕನಿಷ್ಠ ವೇತನವನ್ನು ನಿಗದಿಮಾಡಬೇಕು ಎಂದು ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ- ಸಹಾಯಕಿಯರ ಸಂಘದ ವತಿಯಿಂದ ಜ.28ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ನೀಡುವ ಭರವಸೆಯನ್ನು ಸರಕಾರ ಲಿಖಿತ ರೂಪದಲ್ಲಿ ನೀಡುವವರೆಗೂ ಧರಣಿಯನ್ನು ಮುಂದುವರಿಸುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯ ಅಧ್ಯಕ್ಷೆ ಬಿ.ಪ್ರೇಮ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಸಿಎಂ ಭರವಸೆ ನೀಡಿದ್ದರೆ ಧರಣಿ ಮುಂದುವರಿಸುತ್ತಿರಲಿಲ್ಲ. ಪೊಲೀಸರು ಏಕಾಏಕಿ ಧರಣಿಯನ್ನು ತೆರವುಗೊಳಿಸಲು ಬಂದಿದ್ದರು, ಮಾದ್ಯಮದವರು ಬಂದ ತಕ್ಷಣ ಹಾಗೇ ಬಿಟ್ಟು ಹೋಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ- ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷೆ ಬಿ.ಪ್ರೇಮ, ಗೌರವಾಧ್ಯಕ್ಷೆ ಜಯಲಕ್ಷ್ಮೀ ಬಿ.ಆರ್, ಕಾರ್ಯದರ್ಶಿ ಉಮಾಮಣಿ, ಖಜಾಂಚಿ ವಿಶಾಲಾಕ್ಷ್ಮೀ, ಉಪಾಧ್ಯಕ್ಷೆ ನಿರ್ಮಲಾ ಬಿ.ಎಸ್, ಸಹಕಾರ್ಯದರ್ಶಿ ಶಾಂತ, ರಾಜ್ಯ ಸಲಹೆಗಾರ್ತಿ ಭಾರತಿ ಎನ್.ಪಿ ಮತ್ತಿತರರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News