ಬೆಂಗಳೂರು | ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Update: 2024-02-14 14:26 GMT

Photo: X/@oldschoolmonk

ಬೆಂಗಳೂರು: ನಗರದ ಸ್ಯಾಂಕಿ ಕೆರೆಯಲ್ಲಿ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬುಧವಾರ ವರದಿಯಾಗಿದೆ.

ಸ್ಯಾಂಕಿ ಕೆರೆಯಲ್ಲಿ ತೇಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News