ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿತ : ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ
Update: 2024-10-22 12:02 GMT
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿರುವ ಘಟನೆ ನಗರದ ಬಾಬುಸಾಬ್ ಪಾಳ್ಯದಲ್ಲಿ ನಡೆದಿದ್ದು, ಮೊದಲ ಮಹಡಿಯವರೆಗೆ ನಿರ್ಮಿಸುತ್ತಿದ್ದಂತೆ ಕಟ್ಟಡ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತಹ ಶಂಕೆ ವ್ಯಕ್ತವಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತಹ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.