ಬೆಂಗಳೂರು | ಉದ್ಯಮಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

Update: 2024-03-15 14:16 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್(55) ಹತ್ಯೆ ಪ್ರಕರಣದ ಆರೋಪಿಯನ್ನು ಇಲ್ಲಿನ ಯಲಹಂಕ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸಂತೋಷ್ ಕುಮಾರ್ ಎಂಬುವನನ್ನು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಾ.12ರಂದು ಬಾಗಲೂರು ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಶವ ಪತ್ತೆಯಾಗಿತ್ತು. ಕಾರಿನಲ್ಲಿ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳ ಪರಿಶೀಲಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಮಾ.11ರ ಸೋಮವಾರ ರಾತ್ರಿ ಕೃಷ್ಣ ಯಾದವ್ ತಮ್ಮ ಪರಿಚಿತನಾಗಿರುವ ಸಂತೋಷನೊಂದಿಗೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಸಂತೋಷ್ ನ ಹೆಂಡತಿ ಹಾಗೂ ಪುತ್ರನ ಬಗ್ಗೆ ಕೃಷ್ಣ ಯಾದವ್ ಅವಾಚ್ಯ ಪದ ಬಳಸಿ ನಿಂದಿಸಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಕೊನೆಗೆ ಜಗಳ ವಿಕೋಪಕ್ಕೆ ತಿರುಗಿದಾಗ ಕಾರಿನಲ್ಲಿದ್ದ ಕಬ್ಬಿಣದ ಸಲಾಕೆಯೊಂದನ್ನು ತೆಗೆದುಕೊಂಡ ಸಂತೋಷ್, ಕೃಷ್ಣ ಯಾದವ್‍ಗೆ ಇರಿದು ಹತ್ಯೆ ಮಾಡಿದ್ದ, ಬಳಿಕ ಕಾರನ್ನು ಬಾಗಲೂರು ಕ್ರಾಸ್ ಬಳಿ ಬಿಟ್ಟು ಪರಾರಿಯಾಗಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಆಂಧ್ರ ಮೂಲದ ಕೃಷ್ಣ ಯಾದವ್, ಕೆಲ ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಅವರು ಸೋಮವಾರ ರಾತ್ರಿ ಕೆಲಸಕ್ಕೆ ಎಂದು ಮನೆಯಿಂದ ಹೊರಗೆ ಹೋದವರು ಮರಳಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿದ್ದು, ಈ ಕುರಿತು ಕ್ರಮ ಜರುಗಿಸಲಾಗುವುದು ಎಂದು ಯಲಹಂಕ ಠಾಣಾ ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News