ಬೆಂಗಳೂರು | ರೌಡಿಶೀಟರ್ಸ್ ಫ್ಯಾನ್ಸ್ ಪೇಜ್‍ಗಳ ಕಡಿವಾಣಕ್ಕೆ ಸಿಸಿಬಿ ಕ್ರಮ

Update: 2024-07-05 16:01 GMT

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿರುವ ರೌಡಿ ಶೀಟರ್ಸ್ ಫ್ಯಾನ್ಸ್ ಪೇಜ್‍ಗಳಿಗೆ ಕಡಿವಾಣ ಹಾಕಲು ಸಿಸಿಬಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸೈಬರ್ ಕ್ರೈಂ ಪೊಲೀಸರ ಸಹಾಯದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ರೌಡಿಶೀಟರ್ಸ್ ಫ್ಯಾನ್ ಪೇಜ್‍ಗಳನ್ನು ನಿಷ್ಕ್ರಿಯಗೊಳಿಸುವ ಕೆಲಸವನ್ನು ಸಿಸಿಬಿ ಆರಂಭಿಸಿರುವುದಾಗಿ ಮೂಲಗಳು ತಿಳಿಸಿವೆ.

ರೌಡಿಶೀಟರ್ ಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ‘ಬಾಸ್’ ಟ್ಯಾಗ್‍ಲೈನ್‍ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್‍ಗಳನ್ನು ತೆರೆಯಲಾಗುತ್ತಿದೆ. ಸಿನಿಮಾಗಳ ಡೈಲಾಗ್, ಹಾಡುಗಳನ್ನು ಬಳಸಿ ಪ್ರಚೋದಿಸಲಾಗುತ್ತಿದೆ. ಇಂತಹ ಪೇಜ್‍ಗಳಿಗೆ ಹಿಂಬಾಲಕರ ಸಂಖ್ಯೆ ಹಾಗು ರೌಡಿಸಂನತ್ತ ಆಕರ್ಷಿತರಾಗುತ್ತಿರುವ ಯುವಕರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಿಸಿಬಿ ಮೂಲಗಳು ಹೇಳಿವೆ.

ಈ ಹಿನ್ನೆಲೆಯಲ್ಲಿ ಸಿಸಿಬಿ ಹಾಗೂ ಸೈಬರ್ ಕ್ರೈಂ ಪೊಲೀಸರು ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News