ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕೋರ್ಸ್‌ ಗಳಿಗೆ ಎರಡನೇ ಸುತ್ತಿನ ಪ್ರವೇಶಾತಿ ಅರ್ಜಿ ಆಹ್ವಾನ

Update: 2023-11-21 17:25 GMT

ಬೆಂಗಳೂರು, ನ.21: ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕೋರ್ಸ್‌ ಗಳಿಗೆ ಪ್ರವೇಶಾತಿಯಲ್ಲಿ ಉಳಿದಿರುವ ಸೀಟುಗಳಿಗೆ ಎರಡನೇ ಸುತ್ತಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಅರ್ಜಿಗಳನ್ನು ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಕ್ಕೆ ಸಲ್ಲಿಸಲು ನ.26ರವರೆಗೆ ಅವಕಾಶ ನೀಡಲಾಗಿದೆ. ದಂಡ ಶುಲ್ಕ ಸಹಿತ ಅರ್ಜಿ ಸಲ್ಲಿಸುವ ದಿನಾಂಕವನ್ನು ನ.27ರವರೆಗೆ, ಅರ್ಹತಾ ಪಟ್ಟಿ ಪ್ರಕಟಿಸಿ ಸಮಾಲೋಚನೆಯನ್ನು ನ.29ರಂದು ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣ http://bcu.ac.in ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News