ಬೆಂಗಳೂರು | ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಯಲ್ಲಿ ಬೀಡುಬಿಟ್ಟ ಈಡಿ..!

Update: 2025-01-07 15:50 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಕೊಳವೆಬಾವಿ ಕೊರೆಯುವ ಹಾಗೂ ನೀರು ಸಂಸ್ಕರಣಾ ಘಟಕಗಳ (ಆರ್‌ಒ) ಸ್ಥಾಪನೆಯಲ್ಲಿ ಹಣಕಾಸು ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬಿಬಿಎಂಪಿಯ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಸತತ ಶೋಧ ಕಾರ್ಯ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ 7 ಜನರಿದ್ದ ಅಧಿಕಾರಿಗಳ ತಂಡ ಇಲ್ಲಿನ ಹಡ್ಸನ್ ವೃತ್ತದ ಬಳಿಯಿರುವ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಇಂಜಿನಿಯರ್ ಕಚೇರಿ ಹಾಗೂ ಆಯುಕ್ತರ ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.

ಬೆಂಗಳೂರಿನಲ್ಲಿ 969 ಕೋಟಿ ರೂ. ವೆಚ್ಚದಲ್ಲಿ 9,588 ಕೊಳವೆಬಾವಿ ಹಾಗೂ 976 ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಇದರಲ್ಲಿ 400 ಕೋಟಿ ರೂ. ನಷ್ಟು ಬೃಹತ್ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್, 2019ರಲ್ಲಿ ದಾಖಲೆಗಳ ಸಮೇತ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದರು.

ಅದರನ್ವಯ 2016 ರಿಂದ 2018ರ ವರೆಗಿನ ಆಯುಕ್ತರು, 5 ಜನ ಜಂಟಿ ಆಯುಕ್ತರು, 5 ಜನ ಮುಖ್ಯ ಇಂಜಿನಿಯರ್‌ಗಳು ಸೇರಿದಂತೆ 40ಕ್ಕೂ ಅಧಿಕ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿತ್ತು. ಎಸಿಬಿ ರದ್ದಾದ ಬಳಿಕ ಪ್ರಕರಣದ ತನಿಖೆಯನ್ನು ಈಡಿಗೆ ವಹಿಸಲಾಗಿತ್ತು. ಈ ಪ್ರಕರಣ ಸಂಬಂಧ ಈಡಿ ತನಿಖೆ ಮುಂದುವರೆಸಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News