ಬೆಂಗಳೂರು‌ | ಖಾಸಗಿ ನರ್ಸಿಂಗ್ ಕಾಲೇಜಿನ ಐದು ಬಸ್‍ಗಳು ಬೆಂಕಿಗಾಹುತಿ

Update: 2024-06-29 14:42 GMT

ಬೆಂಗಳೂರು : ಖಾಸಗಿ ನರ್ಸಿಂಗ್ ಕಾಲೇಜಿನ ಬಸ್‍ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಐದು ಬಸ್‍ಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಇಲ್ಲಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ.

ಜೂ.29ರ ಶನಿವಾರ ಮಧ್ಯಾಹ್ನ 2.40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಘಟನೆ ನಡೆದಿದೆ. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಈ ಸಂಬಂಧ ರಾಜಗೋಪಾಲನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News