ಬೆಂಗಳೂರು | ಮಾನವ ಕಳ್ಳಸಾಗಣೆ ಪ್ರಕರಣ : ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ ಎನ್‍ಐಎ
Update: 2024-02-23 16:24 GMT
ಬೆಂಗಳೂರು: ಬಾಂಗ್ಲಾ ಪ್ರಜೆಗಳ ಅಕ್ರಮ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪದಡಿ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬೆಂಗಳೂರಿನಲ್ಲಿ ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ನೆರವಿನೊಂದಿಗೆ ಬೆಂಗಳೂರಿನ ರಾಮ ಮೂರ್ತಿ ನಗರದ ಚನ್ನಸಂದ್ರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರು ಆನಂದಪುರದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಪ್ರತ್ಯೇಕ ಘಟಕವನ್ನು ಸ್ಥಾಪಿಸಿದ್ದರು. ಅಲ್ಲಿ ಅವರು 20 ಕ್ಕೂ ಹೆಚ್ಚು ಬಾಂಗ್ಲಾದೇಶದ ಕುಟುಂಬಗಳಿಗೆ ಭೂಮಿಯನ್ನು ಗುತ್ತಿಗೆ ನೀಡಿ ಟೆಂಟ್‍ಗಳನ್ನು ಸ್ಥಾಪಿಸಿ, ಕಳ್ಳಸಾಗಣೆ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಎನ್‍ಐಎ ತಿಳಿಸಿದೆ.