ಬೆಂಗಳೂರು| ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ: ಸಿಎಂ ಸಿದ್ದರಾಮಯ್ಯ

Update: 2023-12-25 13:05 GMT

ಬೆಂಗಳೂರು: ಕನ್ನಡವನ್ನು ಉಳಿಸಿ, ಬೆಳೆಸುವ ಸಲುವಾಗಿ  ಬೆಂಗಳೂರಿನಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇಕಡಾ 60 ರಷ್ಟು ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದ್ದು, ಇದಕ್ಕೆ ಫೆ. 28 ಕಡೆಯ ದಿನವಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಸಂಬಂಧ ಸಾಮಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡಿರುವ ಅವರು, "ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.

"ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News