ಬೆಂಗಳೂರು | ಮೊಬೈಲ್ ಕಳ್ಳತನ : ಇಬ್ಬರು ಸೆರೆ, 176 ಮೊಬೈಲ್‍ಗಳು ವಶಕ್ಕೆ

Update: 2024-05-21 14:58 GMT
ಸಾಂದರ್ಭಿಕ ಚಿತ್ರ

ಬೆಂಗಳೂರು : ಮೊಬೈಲ್ ಫೋನ್‍ಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣದಡಿ ಇಬ್ಬರನ್ನು ಇಲ್ಲಿನ ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿ 22.40 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 176 ಮೊಬೈಲ್ ಫೊನ್‍ಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ಎ.22ರಂದು ಬೆಳಗಿನ ಜಾವ ವ್ಯಕ್ತಿಯೊಬ್ಬರು ಶಿವಮೊಗ್ಗದಿಂದ ರೈಲಿನಲ್ಲಿ ಬೆಂಗಳೂರಿಗೆ ಬಂದು ನಂತರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದಾಗ ಆರೋಪಿಯು ಅವರ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ವ್ಯಕ್ತಿಯೊಬ್ಬನನ್ನು ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದು ವಿಚಾರಿಸಿದಾಗ ಆತ ಇನ್ನಿಬ್ಬರ ಬಗ್ಗೆ ಮಾಹಿತಿ ನೀಡಿದ್ದಾನೆ. ಈತನ ಮಾಹಿತಿ ಮೇರೆಗೆ ಬಾಗಲೂರಿನ ಗೋಪಾಲಪುರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು, ಠಾಣೆಗೆ ಕರೆತಂದು ವಿಚಾರಿಸಲಾಗಿ ಮೊಬೈಲ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳಿಂದ 176 ವಿವಿಧ ಕಂಪೆನಿಯ ಮೊಬೈಲ್ ಫೊನ್‍ಗಳು ಮತ್ತು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಟಾಯೋಟಾ ಇಟಿಯಾಸ್ ಕಾರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರು ಆರೋಪಿಗಳ ಬಂಧನದಿಂದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 3 ಮೊಬೈಲ್ ಫೊನ್ ಕಳವು ಪ್ರಕರಣ ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News