ಬೆಂಗಳೂರು ಪ್ರೆಸ್‍ಕ್ಲಬ್‍ನ ವಿವಿಧ ಪ್ರಶಸ್ತಿಗಳು ಪ್ರಕಟ | ವಾರ್ಷಿಕ ಪ್ರಶಸ್ತಿಗೆ ʼವಾರ್ತಾಭಾರತಿʼಯ ಪ್ರಕಾಶ್ ಸಹಿತ 50 ಮಂದಿ ಆಯ್ಕೆ

Update: 2025-01-02 16:17 GMT

ಪ್ರಕಾಶ್ ಸಿ.

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಬೆಂಗಳೂರು ಪ್ರೆಸ್‍ಕ್ಲಬ್ ವತಿಯಿಂದ ನೀಡುವ ‘ಪ್ರೆಸ್‍ಕ್ಲಬ್ ಸುವರ್ಣ ಮಹೋತ್ಸವ ಪ್ರಶಸ್ತಿ’ ಹಾಗೂ ‘ವಾರ್ಷಿಕ ಪ್ರಶಸ್ತಿ’ ಪ್ರಕಟವಾಗಿದ್ದು, ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಇಂದೂಧರ ಹೊನ್ನಾಪುರ ಸುಭಾಶ್ ಕೆವಿನ್ ರೈ, ಜಿ.ಎಸ್. ಕೃಷ್ಣಮೂರ್ತಿ, ಡಾ. ನಾಗೇಶ್ ಬಸವರಾಜ್ ‘ಪ್ರೆಸ್‍ಕ್ಲಬ್ ಸುವರ್ಣ ಮಹೋತ್ಸವ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ವಾರ್ತಾಭಾರತಿ ದಿನಪತ್ರಿಕೆಯ ಬೆಂಗಳೂರು ಬ್ಯೂರೋ ಮುಖ್ಯಸ್ಥ ಪ್ರಕಾಶ್ ಸಿ., ಶ್ರೀಕಾಂತ್ ಹುನಸವಾಡಿ, ಯತಿರಾಜು, ಪುಣ್ಯವತಿ ಎಚ್.ಪಿ., ಮುಹಮದ್ ಇಸ್ಮಾಯಿಲ್ ಎನ್.ಎ., ರಾಜು ಮಳವಳ್ಳಿ, ಅನಿಸ್ ನಿಸಾರ್ ಅಹ್ಮದ್, ಶಿವಕುಮಾರ್ ಮೆಣಸಿನಕಾಯಿ ಸೇರಿದಂತೆ 50 ಮಂದಿ ಹಿರಿಯ ಪತ್ರಕರ್ತರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜ.12ರ ಸಂಜೆ ಇಲ್ಲಿನ ಪ್ರೆಸ್‍ಕ್ಲಬ್ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಆರ್. ಶ್ರೀಧರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಪ್ರೆಸ್‍ಕ್ಲಬ್ ನೀಡುವ ‘ವರ್ಷದ ವ್ಯಕ್ತಿ ಪ್ರಶಸ್ತಿ’ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ‘ವಿಶೇಷ ಪ್ರಶಸ್ತಿ’ಗೆ ಇಂಧನ ಸಚಿವ ಕೆ.ಜೆ.ಜಾರ್ಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಆಯ್ಕೆಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News