ಬೆಂಗಳೂರು | ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ
Update: 2024-03-22 07:37 GMT
ಬೆಂಗಳೂರು: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರ ಅಕ್ರಮ ಬಂಧನವನ್ನು ವಿರೋಧಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಆಮ್ ಆದ್ಮಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಈಡಿ)ವು ಗುರುವಾರ ರಾತ್ರಿ ಬಂಧಿಸಿತ್ತು. ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದಿಲ್ಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಈಡಿ)ವು ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿ, ಬಳಿಕ ಅವರನ್ನು ವಶಕ್ಕೆ ಪಡೆದಿದ್ದರು.