ಬೆಂಗಳೂರು | ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳ ರಕ್ಷಣೆ
ಬೆಂಗಳೂರು: ನಗರದ ಸಿಗ್ನಲ್‍ಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳನ್ನು ರಕ್ಷಿಸಿ, 37 ಜನ ಪೋಷಕರನ್ನು ಸಿಸಿಬಿ ಪೋಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನು ಬಳಸಿ ಭಿಕ್ಷಾಟನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು, ನಗರದ ಕೆ.ಜಿ.ಹಳ್ಳಿ ಹಾಗೂ ಫ್ರೇಜರ್‍ಟೌನ್ ಸುತ್ತಮುತ್ತಲಿನ ಸಿಗ್ನಲ್‍ಗಳಲ್ಲಿ ಮಕ್ಕಳನ್ನ ಭಿಕ್ಷಾಟನೆಗೆ ಬಳಕೆ ಮಾಡುತ್ತಿದ್ದ 37 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವುದು ಬೆಳಕಿಗೆ ಬಂದಿದೆ.
ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 47 ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ಒಪ್ಪಿಸಲಾಗಿದೆ ಎಂದು ಗೊತ್ತಾಗಿದೆ. ಮಾನವ ಕಳ್ಳಸಾಗಾಣಿಕೆ ಮೂಲಕ ನಗರಕ್ಕೆ ಕರೆತರಲಾಗಿದೆಯೇ? ಅಥವಾ ಪೋಷಕರೇ ತಮ್ಮ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳಿದಾರೆಯೇ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.