ಬೆಂಗಳೂರು| ವೃದ್ಧೆಯ ಕೈಕಾಲು ಕಟ್ಟಿ ಮನೆ ದರೋಡೆ: ಆರೋಪಿ ಸೆರೆ

Update: 2024-01-18 16:19 GMT

ಬೆಂಗಳೂರು: ವೃದ್ಧೆಯ ಕೈ ಕಾಲು ಕಟ್ಟಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧ ಓರ್ವ ಆರೋಪಿಯನ್ನು ಇಲ್ಲಿನ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಆರೋಪಿ ರೌಡಿ ಕುಮಾರ ಯಾನೆ ಲೊಡ್ಡೆ ಕುಮಾರ(30) ಎಂಬುವನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜನವರಿ 9ರಂದು ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರ ಮನೆಗೆ ನುಗ್ಗಿದ್ದ ಆರೋಪಿಗಳ ಗುಂಪು, ಆಕೆಯ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಬಳಿಕ ಮನೆಯಲ್ಲಿದ್ದ 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, 50 ಸಾವಿರ ನಗದು ದರೋಡೆ ಮಾಡಿ ಪರಾರಿಯಾಗಿದ್ದರು.

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಸದ್ಯ ಓರ್ವ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಕದ್ದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗೆ ಸಾಥ್ ನೀಡಿದ್ದ ಇನ್ನಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News