ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ

Update: 2024-04-08 19:16 IST
ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಮೃತದೇಹ ಪತ್ತೆ
  • whatsapp icon

ಬೆಂಗಳೂರು: ಕೋಣನಕುಂಟೆಯಲ್ಲಿ ಹೋಟೆಲ್ ಪಕ್ಕದ ಖಾಲಿ ಜಾಗದಲ್ಲಿ ವೀರೇಶ್ ಎಂಬ ಯುವಕನ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ಮೃತ ವೀರೇಶ್ ಮೂಲತಃ ರಾಯಚೂರಿನವನು ಎನ್ನಲಾಗಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. 80 ಅಡಿ ರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ. ಅದೇ ಕಟ್ಟಡದಲ್ಲಿ ವೀರೇಶ್ ಉಳಿದುಕೊಳ್ಳುತ್ತಿದ್ದ. ಆದರೆ, ಸೋಮವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.

ಘಟನಾ ಸ್ಥಳದಲ್ಲಿ ರಕ್ತ ಕಲೆಗಳು ಪತ್ತೆಯಾಗಿವೆ. ಆದರೆ, ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಸ್ಥಳಕ್ಕೆ ಎಫ್‍ಎಸ್‍ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಸದ್ಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News