ಬೆಂಗಳೂರು | ಕೆಲಸಕ್ಕಿದ್ದ ಮನೆ ಮಾಲಕನ ಪ್ರಜ್ಞೆ ತಪ್ಪಿಸಿ ಕಳ್ಳತನ : ನೇಪಾಳ ಮೂಲದ ದಂಪತಿ ಬಂಧನ

Update: 2024-11-08 19:19 IST
ಬೆಂಗಳೂರು | ಕೆಲಸಕ್ಕಿದ್ದ ಮನೆ ಮಾಲಕನ ಪ್ರಜ್ಞೆ ತಪ್ಪಿಸಿ ಕಳ್ಳತನ : ನೇಪಾಳ ಮೂಲದ ದಂಪತಿ ಬಂಧನ

ಸಾಂದರ್ಭಿಕ ಚಿತ್ರ

  • whatsapp icon

ಬೆಂಗಳೂರು : ಮಾಲಕನ ಪ್ರಜ್ಞೆ ತಪ್ಪಿಸಿ ಕಳವು ಮಾಡಿದ್ದ ಆರೋಪ ಪ್ರಕರಣ ಸಂಬಂಧ ನೇಪಾಳ ಮೂಲದ ದಂಪತಿಯನ್ನು ಇಲ್ಲಿನ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೇಪಾಳ ಮೂಲದ ಗಣೇಶ್ ಹಾಗೂ ಗೀತಾ ದಂಪತಿ ಬಂಧಿತರು ಎಂದು ಪೊಲೀಸರು ಹೇಳಿದ್ದಾರೆ.

ಮಾಲಕ ನಾಗೇಶ್ ಅವರ ಜಯನಗರದಲ್ಲಿರುವ ಮನೆಯಲ್ಲಿ ಈ ದಂಪತಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅ.20ರಂದು ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮವಿದ್ದ ಕಾರಣ ನಾಗೇಶ್ ಅವರನ್ನು ಹೊರತುಪಡಿಸಿ ಮನೆಯವರೆಲ್ಲರೂ ತೆರಳಿದ್ದರು ಎನ್ನಲಾಗಿದೆ.

ನಾಗೇಶ್ ಒಂಟಿಯಾಗಿದ್ದ ಸಮಯದಲ್ಲಿ ಅವರ ಪ್ರಜ್ಞೆ ತಪ್ಪಿಸಿದ್ದ ಆರೋಪಿ ದಂಪತಿ ಮನೆಯಲ್ಲಿದ್ದ 1 ಕೆಜಿ ಚಿನ್ನಾಭರಣ, 2 ಲಕ್ಷ ರೂಪಾಯಿ ನಗದು ಕದ್ದು ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್ ನೆಟ್‍ವರ್ಕ್ ಆಧರಿಸಿ ಮುಂಬೈನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News