ಬೆಂಗಳೂರು | ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ನಗದು ಕಳ್ಳತನ : ಆರೋಪಿಯ ಬಂಧನ

Update: 2024-05-14 12:58 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ 25 ಲಕ್ಷ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಮಹೇಶ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಾ.20ರ ರಾತ್ರಿ ವಿಜಯನಗರದ ಸರ್ವಿಸ್ ರಸ್ತೆಯಲ್ಲಿರುವ ಕೆ.ಎನ್.ಎಸ್ ಇನ್ಫ್ರಾಸ್ಟ್ರಕ್ಚರ್ ಪ್ರೈ.ಲಿ. ಕಚೇರಿಯ ಕ್ಯಾಶ್ ಬಾಕ್ಸ್ ನಲ್ಲಿದ್ದ 25ಲಕ್ಷ ರೂ.ನಗದು ಕದ್ದು ಆರೋಪಿ ತಲೆಮರೆಸಿಕೊಂಡಿದ್ದ. ನಿವೃತ್ತ ಸಬ್‍‌ ಇನ್‍ಸ್ಪೆಕ್ಟರ್ ಒಬ್ಬರ ಮಗನಾಗಿರುವ ಆರೋಪಿ ಕಚೇರಿಯಲ್ಲಿ ಡಾಕ್ಯುಮೆಂಟ್ ಎಕ್ಸಿಕ್ಯುಟಿವ್ ಕೆಲಸ ಮಾಡಿಕೊಂಡಿದ್ದ. ಇತ್ತೀಚಿಗೆ ಕಚೇರಿ ಸಿಬ್ಬಂದಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕಂಪೆನಿಯ ಮಾಲಕರು ವಿಜಯನಗರ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಎ.28ರಂದು ಮಧ್ಯಾಹ್ನ ಮಡಿಕೇರಿ ಟೋಲ್‍ಗೇಟ್ ಬಳಿ ಆರೋಪಿಯನ್ನು ಬಂಧಿಸಿದ್ದು, ಬಳಿಕ ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ತನ್ನ ಸ್ನೇಹಿತನ ಕೊಠಡಿಯಲ್ಲಿಟ್ಟಿದ್ದ 24.50 ಲಕ್ಷ ರೂ. ಹಣವನ್ನೂ ಜಪ್ತಿ ಮಾಡಿರುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News