ಬೆಂಗಳೂರು | ವಾಹನಗಳ ಕಳ್ಳತನ : ಆಟೋ ಚಾಲಕನ ಬಂಧನ

Update: 2024-06-02 13:06 GMT
ಸಾಂದರ್ಭಿಕ ಚಿತ್ರ

ಬೆಂಗಳೂರು : ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಪ್ರಕರಣದಡಿ ಆಟೋ ಚಾಲಕನೊಬ್ಬನನ್ನು ನಗರದ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 2.6ಲಕ್ಷ ರೂ.ಮೌಲ್ಯದ ಮೂರು ದ್ವಿಚಕ್ರ ವಾಹನ ಹಾಗೂ ನಾಲ್ಕು ಮೊಬೈಲ್‍ಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಆರೋಪಿಯನ್ನು ಶಿವಾಜಿನಗರ ನಿವಾಸಿ ಶಾಬಾಜ್ ಖಾನ್ ಎಂದು ಗುರುತಿಸಲಾಗಿದೆ. ಆರೋಪಿ ಎಸೆಸೆಲ್ಸಿ ಓದಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹಲಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಕಳ್ಳತನದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದಾಗ ಕಳ್ಳತನವಾಗಿರುವ ದ್ವಿಚಕ್ರ ವಾಹನಗಳು ಮತ್ತು ಮೊಬೈಲ್‍ಗಳ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈತನ ವಿರುದ್ಧ ಹಲಸೂರು ಠಾಣೆಯಲ್ಲಿ ಮೂರು, ಹೊಸಕೋಟೆ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿವೆ. ಸದ್ಯ ಆರೋಪಿ ವಿರುದ್ಧ ಕಾನೂನು ಕ್ರಮ ಜರುಗುಸಿಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News