ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಜಲಾವೃತ : ವಿಡಿಯೋ ವೈರಲ್

Update: 2024-10-16 13:08 GMT

ಬೆಂಗಳೂರು: ನಗರದಲ್ಲಿ ಮಂಗಳವಾರದಿಂದ ಸುರಿದ ಸುರಿದ ಭಾರಿ ಮಳೆಗೆ ಮಾನ್ಯತಾ ಟೆಕ್ ಪಾರ್ಕ್ ಕೆರೆಯಂತಾಗಿದೆ. ಸುಮಾರು 300 ಎಕರೆ ಪ್ರದೇಶದರಲ್ಲಿರುವ ಟೆಕ್ ಪಾರ್ಕ್ ನಿರ್ಮಾಣವಾಗಿದ್ದು, ಈಗ ಮಳೆಗೆ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಮಳೆಯಿಂದ ಟೆಕ್‍ಪಾರ್ಕ್‍ನಲ್ಲಿ ಉಂಟಾದ ಅವಾಂತರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ರಸ್ತೆ ತುಂಬಾ ನೀರು ತುಂಬಿಕೊಂಡು ವಾಹನಗಳು ಅದರಲ್ಲಿ ಸಿಲುಕಿ ಸಂಚಾರಕ್ಕೆ ಸವಾರರು ಪರದಾಡುವ ದೃಶ್ಯಗಳು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಅಲ್ಲದೆ ಬುಧವಾರದಂದು ಮಾನ್ಯತಾ ಟೆಕ್ ಪಾರ್ಕ್ ಆವರಣದ ಮುಂಭಾಗದಲ್ಲಿರುವ ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಲ್ಲಿ ಮಣ್ಣು ಕುಸಿತ ಸಂಭವಿಸಿದ್ದು, ಬೃಹತ್ ಮರ ಮತ್ತು ತಾತ್ಕಾಲಿಕ ಶೆಡ್ ಕುಸಿಯುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಟೆಕ್ ಪಾರ್ಕ್ ತಗ್ಗು ಪ್ರದೇಶದಲ್ಲಿ ನಿರ್ಮಾಣವಾಗಿದ್ದು, ಮಳೆ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಇಲ್ಲವಾಗಿದೆ. ಹೀಗಾಗಿ ಟೆಕ್ ಪಾರ್ಕ್ ಕೆರೆಯಂತಾಗಿದ್ದು, ನಾಲ್ಕೈದು ಅಡಿ ಎತ್ತರಕ್ಕೆ ನೀರು ನಿಂತುಕೊಂಡಿತ್ತು. ಮಳೆಯ ಆರ್ಭಟಕ್ಕೆ ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ರಸ್ತೆಯೇ ಕಾಣುತ್ತಿಲ್ಲ. ಮಂಡಿಯುದ್ದದ ನೀರಿನಲ್ಲೇ ಬೈಕ್ ಸವಾರರು ಪರದಾಡುತ್ತಿದ್ದಾರೆ. ಅಲ್ಲದೆ ನಿರ್ಮಾಣ ಹಂತದಲ್ಲಿರುವ ಗೋಡೆಯಿಂದ ಕೆಳಗೆ ಹರಿಯುವ ನೀರು ನೋಡುಗರಿಗೆ ಕೃತಕ ಜಲಪಾತದಂತೆ ಭಾಸವಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News