ಪ್ರೊ.ಬರಗೂರು ರಾಮಚಂದ್ರಪ್ಪ ಅವರಿಗೆ ವರನಟ ‘ಡಾ.ರಾಜ್‍ಕುಮಾರ್ ಪ್ರಶಸ್ತಿ’

ಪ್ರೊ.ಬರಗೂರು ರಾಮಚಂದ್ರಪ್ಪ
ಬೆಂಗಳೂರು : ಕನ್ನಡ ಜನಶಕ್ತಿ ಕೇಂದ್ರ ನೀಡುವ ವರನಟ ಡಾ.ರಾಜಕುಮಾರ್ ಪ್ರಶಸ್ತಿಗೆ ಹಿರಿಯ ಸಾಹಿತಿ, ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.
ಮಂಗಳವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಡಾ.ಬರಗೂರು ರಾಮಚಂದ್ರಪ್ಪ ನಾಡು, ನುಡಿ, ನೆಲ, ಜಲದ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುತ್ತಾ, ನಾಡು, ನುಡಿಯ ಅನುಪಮ ಸೇವೆಯನ್ನು ಪರಿಗಣಿಸಿ ಅವರಿಗೆ ಡಾ.ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಕಂಚಿನ ಫಲಕವನ್ನು ಒಳಗೊಂಡಿದೆ. ಎ.18ರಂದು ಸಂಜೆ 5ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಮರ್ಶಕ ಡಾ. ಎಚ್.ಎಸ್.ರಾಘವೇಂದ್ರರಾವ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಸಿದ್ದ ಚಲನಚಿತ್ರ ನಿರ್ಮಾಪಕ ಎಸ್.ವಿ.ರಾಜೇಂದ್ರಸಿಂಗ್‍ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಾರೆ. ಹೋಟೆಲ್ ನವಯುಗ ಮಾಲಕ ಕೆ. ಮೋಹನರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ ಎಂದು ಮಾಹತಿ ನೀಡಿದ್ದಾರೆ.