ಲೋಕಾಯುಕ್ತಕ್ಕೆ ‘ಕಸ ನಿರ್ವಹಣೆ’ ಬಗ್ಗೆ ವರದಿ ಸಲ್ಲಿಸಿದ ಬಿಬಿಎಂಪಿ
ಬೆಂಗಳೂರು : ನಗರದಲ್ಲಿ ಕಸ ನಿರ್ವಹಣೆಯ ಬಗ್ಗೆ ಬಿಬಿಎಂಪಿಯು ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರದಂದು ಪಾಲಿಕೆಯ ಅಧಿಕಾರಿಗಳು ಲೋಕಾಯುಕ್ತಗೆ ವರದಿಯನ್ನು ಸಲ್ಲಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ನಗರದಲ್ಲಿ ಬ್ಲಾಕ್ ಸ್ಪಾಟ್‍ಗಳೆಂದು ಗುರುತಿಸಿದ ಕಡೆ ಕಸವನ್ನು ಬಿಸಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಸಿಸಿಟಿವಿ ಕ್ಯಾಮಾರಗಳನ್ನು ಅಡವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.
ಯಶವಂತಪುರದ ರೈಲ್ವೆ ಟ್ರ್ಯಾಕ್ ಬಳಿ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಷ್ಟವಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ರೈಲ್ವೆ ಇಲಾಖೆಗೆ ಪತ್ರದ ಮೂಲಕ ತಿಳಿಸಲಾಗಿದೆ. ನಗರದಲ್ಲಿ ಪೀಕ್ ಅವರ್ ಸಮಯದಲ್ಲಿ ಕಸ ಸಾಗಾಣೆ ಮಾಡುವ ವಾಹನಗಳು ನಗರದಲ್ಲಿ ಚಲಿಸುತ್ತಿರುವುದರಿಂದ ನಾಗರೀಕರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಲೋಕಾಯುಕ್ತಗೆ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ಮನೆಯ ಕಂದಾಯ ಸ್ವೀಕರಿಸುವ ಸಂದರ್ಭದಲ್ಲಿ ಘನತ್ಯಾಜ್ಯ ವಿಲೇವಾರಿ ತೆರಿಗೆಯನ್ನು ಪ್ರತ್ಯೇಕವಾಗಿ ಸ್ವೀಕರಿಸಲಾಗುತ್ತಿದೆ. ಕಸ ವಿಲೇವಾರಿಯನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ ಎಂದು ತಿಳಿಸಿದೆ.