ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ: ಸಚಿವ ರಾಮಲಿಂಗಾರೆಡ್ಡಿ

Update: 2025-02-23 18:14 IST
ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ: ಸಚಿವ ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿ

  • whatsapp icon

ಬೆಂಗಳೂರು : ಯಾರಿಗೆ ಇಷ್ಟವಿರಲಿ, ಬಿಡಲಿ. ಮುಂದಿನ ಮೇ ತಿಂಗಳಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020ರ ಸೆಪ್ಟೆಂಬರ್‍ನಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹಿಂದೆ ಇದ್ದ ಬಿಜೆಪಿ ಸರಕಾರ ಹಾಗೂ 2015ರ ನಂತರ ನಮ್ಮ ಸರಕಾರದಿಂದಲೂ ಚುನಾವಣೆ ನಡೆಯದೆ ವಿಳಂಬವಾಗಿದೆ. ಆದರೆ, ಬಹುಬೇಗನೆ ಚುನಾವಣೆ ನಡೆಸಬೇಕೆಂಬುದು ನನ್ನ ಬಯಕೆ ಎಂದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿದ್ದರಿಂದ ಚುನಾವಣೆ ವಿಳಂಬವಾಗಿದೆ. ನಾವು ಇಷ್ಟ ಪಡುತ್ತೇವೋ, ಇಲ್ಲವೋ ಮೇನಲ್ಲಿ ಚುನಾವಣೆ ನಡೆಸಬೇಕು. ಇಲ್ಲದಿದ್ದರೆ ಸುಪ್ರೀಂಕೋರ್ಟ್‍ನಿಂದಲೇ ನಮಗೆ ಆದೇಶ ಹೊರಡಿಸಬಹುದು ಎಂದು ರಾಮಲಿಂಗಾರೆಡ್ಡಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News