ಬೆಂಗಳೂರು | ಅಡುಗೆ ಅನಿಲ ಸ್ಫೋಟ : ಇಬ್ಬರಿಗೆ ಗಾಯ

Update: 2024-10-24 13:12 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿಯ ರಿಹಾನ್, ಆಯಾನ್ ಎಂಬುವರು ಗಾಯಗೊಂಡಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅನ್ವರ್ ಎಂಬಾತ ಬಾಡಿಗೆ ಮನೆ ಪಡೆದು ಸಂಬಂಧಿಕರಾದ ರಿಹಾನ್, ಆಯಾನ್ ನನ್ನು ಗ್ಯಾಸ್ ರಿಫೀಲ್ ಮಾಡಲು ನಿಯೋಜಿಸಿ ಹೊರಗೆ ಹೋಗಿದ್ದನು ಎನ್ನಲಾಗಿದೆ. ಈ ವೇಳೆ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News